
ಚಿಕ್ಕಬಳ್ಳಾಪುರ: ಇಂದಿನಿಂದ ಒಂದು ತಿಂಗಳ ಕಾಲ ಪ್ರವಾಸಿ ತಾಣ ನಂದಿ ಗಿರಿಧಾಮ ಬಂದ್ ಮಾಡಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ವೀಕೆಂಡ್ ನಲ್ಲಿ ಮಾತ್ರ ನಂದಿ ಗಿರಿಧಾಮ ಪ್ರವೇಶಿಸಲು ಅನುಮತಿ ನೀಡಲಾಗಿದೆ.
ನಂದಿ ಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಪ್ರವೇಶ ಬಂದ್ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾಹಿತಿ ನೀಡಿದ್ದಾರೆ.