alex Certify ಪ್ರವಾಸಿಗರ ಗಮನಕ್ಕೆ : ನ.4 ರಿಂದ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರ ಗಮನಕ್ಕೆ : ನ.4 ರಿಂದ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4 ರಿಂದ 3 ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ದತ್ತಮಾಲಾ ಅಭಿಯಾನ ಹಿನ್ನೆಲೆ ನವೆಂಬರ್ 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅ.30 ರಿಂದ ನ.5 ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದ್ದು, ಸಾವಿರಾರು ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಮುಳ್ಳಯ್ಯನಗಿರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಬಾಬಾ ಬುಡನ್ಗಿರಿ ಬೆಟ್ಟಸಾಲಿನಲ್ಲಿರುವ ಒಂದು ಶಿಖರ. 1923 ಮೀಟರ್ (೬೩೧೭ ಅಡಿ) ಎತ್ತರದಲ್ಲಿರುವ ಮುಳ್ಳಯ್ಯನ ಗಿರಿ ಕರ್ನಾಟಕದ ಅತ್ಯುನ್ನತ ಪರ್ವತಶಿಖರವಾಗಿದೆಮಳೆಗಾಲದಲ್ಲಿ ಇಲ್ಲಿಗೆ ಭೇಟಿ ನೀಡಿದರೆ ಇಲ್ಲಿಯ ಅನುಭವವೇ ಬೇರೆ ಹಾಗಾಗಿ ಸಾಕಷ್ಟು ಪ್ರವಾಸಿಗರು, ಚಾರಣಿಗರು ಈ ಸಮಯದಲ್ಲಿ ಭೇಟಿ ನೀಡುವುದರಿಂದ ಚಿಕ್ಕಮಗಳೂರು ರಸ್ತೆ ಸದಾ ವಾಹನಗಳಿಂದ ತುಂಬಿರುತ್ತದೆ. ಇಲ್ಲಿನ ಗಿರಿಶಿಖರವನ್ನು ಹತ್ತುವಾಗ ಸಿಗುವ ಸಂತೋಷ ಬೇರೆಲ್ಲೂ ಸಿಗಲಾರದು ಮುಳ್ಳಯ್ಯನಗಿರಿ ಅನ್ನೋ ಹೆಸರೇ ನಿಮ್ಮನ್ನು ಆಕರ್ಷಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...