
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಮಾಣಿಕ್ಯಧಾರ ತಾಣಗಳಿಗೆ ಮಾರ್ಚ್ 15 ರಿಂದ 17ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಐ.ಡಿ. ಪೀಠ, ಶ್ರೀ ಗುರು ದತ್ತಾತ್ರೇಯ ಬಾಬಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಮಾರ್ಚ್ 15 ರಿಂದ 17ರ ವರೆಗೆ ಉರುಸ್ ಕಾರ್ಯ ಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತಾದಿಗಳು ವಾಹನಗಳ ಮೂಲಕ ಆಗಮಿಸಲಿದ್ದಾರೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ತೆರಳುವ ರಸ್ತೆ ತುಂಬಾ ಕಿರಿದಾಗಿದ್ದು, ಕಳೆದ ವರ್ಷ ಭಾರಿ ಮಳೆಯಿಂದ ಹಾಳಾಗಿದೆ. ಆದ ಕಾರಣ ಹೆಚ್ಚಿನ ಜನಸಂದಣಿಯಿಂದಾಗಿ ಅನಾನುಕೂಲವಾಗುವುದನ್ನು ತಪ್ಪಿಸಲು ಪ್ರವಾಸಿಗರಿಗೆ ಪ್ರವಾಸ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.