alex Certify ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಯಿಂಗ್ ತಾತ್ಕಾಲಿಕ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಯಿಂಗ್ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಸಂಘರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟೋಯಿಂಗ್ ತಾತ್ಕಾಲಿಕ ಸ್ಥಗಿತಕ್ಕೆ ತೀರ್ಮಾನಿಸಲಾಗಿದೆ.

ಟೋಯಿಂಗ್ ವ್ಯವಸ್ಥೆಗೆ ಹೊಸ ರೂಪ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಅಂತೆಯೇ, ಬೆಂಗಳೂರು ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ತಾತ್ಕಾಲಿಕವಾಗಿ ಟೋಯಿಂಗ್ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.

ಜನರಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಟೋಯಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಟೋಯಿಂಗ್ ಗೆ ಹೊಸ ರೂಪ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...