ಬೆಂಗಳೂರು: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಉದ್ದೇಶದಿಂದ ರಾಜ್ಯದ 7 ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳ ಟೌನ್ ಶಿಪ್ ಸ್ಥಾಪಿಸಲಾಗುವುದು. ಬಜೆಟ್ ನಲ್ಲಿ ಘೋಷಿಸಿದ್ದ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದ್ದು, ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಲಾಗಿದೆ.
ಸಣ್ಣ ಕೈಗಾರಿಕೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ 7 ಕಡೆ ಸಣ್ಣ ಕೈಗಾರಿಕಾ ವಸಾಹತು ಸ್ಥಾಪನೆ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಿಂದ ಕೈಗಾರಿಕಾ ವಸಾಹತು ಸ್ಥಾಪಿಸಲಿದ್ದು 7 ಪ್ರದೇಶಗಳನ್ನು ಗುರುತಿಸಲಾಗಿದೆ. ಐದು ಕಡೆ ಈಗಾಗಲೇ ಭೂಮಿ ಲಭ್ಯವಿದ್ದು, ಉಳಿದ ಕಡೆ ಕೆಐಎಡಿಬಿ ಇಲ್ಲವೇ ಪ್ರತ್ಯೇಕವಾಗಿ ಭೂಮಿ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ, ಉತ್ತರ ಕನ್ನಡ ಜಿಲ್ಲೆಯ ಕೊಡಕಣಿ, ಬೆಳಗಾವಿ ಜಿಲ್ಲೆಯ ಕಣಗಾಲ, ಚಾಮರಾಜನಗರ ಜಿಲ್ಲೆಯ ಬದನಗುಪ್ಪೆ, ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಸಣ್ಣ ಕೈಗಾರಿಕಾ ವಸಾಹತು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.