
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಗಾಗಿ ನೂರಾರು ಮರಗಳ ಮಾರಣಹೋಮ ನಡೆಸಿರುವ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಹೆಚ್.ಎಂ.ಟಿ ಅರಣ್ಯ ಪ್ರದೇಶದಲ್ಲಿ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಭಾರಿ ಸೆಟ್ ನಿರ್ಮಾಣ ಮಾಡಲಾಗಿದೆ. ಶೂಟಿಂಗ್ ಸೆಟ್ ನಿರ್ಮಾಣಕ್ಕಾಗಿ ಅರಣ್ಯ ಪ್ರದೇಶದಲ್ಲಿರುವ ನೂರಾರು ಮರಗಳನ್ನು ಕಡಿಯಲಾಗಿರುವುದು ಸ್ಯಾಟಲೈಟ್ ಇಮೇಜ್ ಪರಿಶೀಲನೆ ವೇಳೆ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮರ ಕಡಿದವರ ವಿರುದ್ಧ ಅರಣ್ಯ ಅಪರಾಧ ಅಡಿ ಕೇಸ್ ದಾಖಲಿಸಿ, ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.