ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಶಿರಾ ಮೂಲದ ಮಂಜಣ್ಣ (45) ಮೃತ ದುರ್ದೈವಿ. ಅಡಿಕೆ ಕೊಯ್ಯಲು ಟ್ರ್ಯಾಕ್ಟರ್ ನಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ 8 ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.