
ವರ್ಷಾಂತ್ಯದೊಳಗೆ ಬೆಂಗಳೂರಿನ ಬಹುತೇಕ ಜಂಕ್ಷನ್ ಗಳಲ್ಲಿ ಎಐ ಸಿಗ್ನಲ್ ಅಳವಡಿಸಲಾಗುವುದು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ(ಎಐ) ತಂತ್ರಜ್ಞಾನ ಆಧರಿಸಿದ ಸಂಚಾರ ನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಬೆಂಗಳೂರು ನಗರದಲ್ಲಿನ ಬಹುತೇಕ ಜಂಕ್ಷನ್‌ಗಳಲ್ಲಿ ಎಐ ಚಾಲಿತ ಟ್ರಾಫಿಕ್ ಸಿಗ್ನಲ್‌ಗಳು ಕಾರ್ಯನಿರ್ವಹಿಸಲಿವೆ. ಈಗಾಗಲೇ 41 ಜಂಕ್ಷನ್‌ಗಳಲ್ಲಿ ಎಐ ಎಟಿಸಿಎಸ್ ತಂತ್ರಜ್ಞಾನ ಅನುಷ್ಠಾನಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.