ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಮೀರಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ ಮೊದಲ ದಿನವೇ 33 ಪ್ರಕರಣ ದಾಖಲಿಸಲಾಗಿದೆ. 770 ಚಾಲಕರಿಗೆ ದಂಡ ವಿಧಿಸಲಾಗಿದೆ.
ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿಗದಿತ ವೇಗದ ಮಿತಿ ಮೀರಿ ವಾಹನ ಚಾಲನೆ ಮಾಡಿದ 33 ವಾಹನ ಚಾಲಕರ ವಿರುದ್ಧ ರಾಮನಗರ ಮತ್ತು ಮಂಡ್ಯ ಜಿಲ್ಲಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಉಳಿದಂತೆ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗ ಮಿತಿಮೀರಿ ವಾಹನ ಚಲಾಯಿಸಿದ 770 ಚಾಲಕರಿಗೆ ದಂಡ ವಿಧಿಸಲಾಗಿದೆ.
ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ವಾಹನಗಳ ವೇಗ ಮಿತಿ ಗಂಟೆಗೆ 130 ಕಿಲೋಮೀಟರ್ ನಿಗದಿಪಡಿಸಲಾಗಿದೆ. ಗುರುವಾರದಿಂದಲೇ ರಾಜ್ಯ ಪೊಲೀಸರು ಹೆದ್ದಾರಿಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.