ಬೆಂಗಳೂರು: ಎಲ್ಲಾ ಟೋಲ್ ಗಳಲ್ಲಿ ಸೋಮವಾರ ರಾತ್ರಿಯಿಂದ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುತ್ತಿರುವುದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರೈತರ ತರಕಾರಿ ವಾಹನಗಳನ್ನು ಟೋಲ್ ಗಳಲ್ಲಿ ಉಚಿತವಾಗಿ ಬಿಡಲು ಒತ್ತಾಯಿಸಲಾಗಿದೆ. ಏರ್ಪೋರ್ಟ್ ಟೋಲ್ ಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸಿದ್ದು, ರೈತರ ಹೋರಾಟದ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.