alex Certify ಹೆಲ್ಮೆಟ್ ಧರಿಸಿಲ್ಲ ಎಂದು ಲಾರಿ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲ್ಮೆಟ್ ಧರಿಸಿಲ್ಲ ಎಂದು ಲಾರಿ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು

ಕಾರವಾರ: ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸರು ದಂಡ ವಿಧಿಸಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.

ಚಂದ್ರಕಾಂತ್ ಹಳ್ಳೇರ ಎಂಬುವವರು ಮರಳು ತುಂಬಿದ ಟಿಪ್ಪರ್ ಲಾರಿ ಚಲಾಯಿಸುತ್ತಿದ್ದರು. ಈ ವೇಳೆ ಹೊನ್ನಾವರ ಸಂಚಾರಿ ಪೊಲೀಸರು ಅಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ವಿಧಿಸಿ ರಶೀದಿ ನೀಡಿದ್ದಾರೆ. ರಶೀದಿ ನೋಡಿದ ಚಾಲಕ ಶಾಕ್ ಆಗಿದ್ದಾರೆ. ರಶೀದಿಯಲ್ಲಿರುವ ದಂಡ ವಿಥೌಟ್ ಹೆಲ್ಮೆಟ್ ಗೆ ಎಂದಿದೆ.

ಈ ವೇಳೆ ಚಾಲಕ ತಾನು ಬೈಕ್ ಓಡಿಸುತ್ತಿಲ್ಲ, ಟಿಪ್ಪರ್ ಲಾರಿ ಓಡಿಸುತ್ತಿದ್ದೇನೆ ಎಂದು ಪೊಲಿಸರಿಗೆ ಹೇಳಿದರೂ ಹೇ ಅದೆಲ್ಲ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ. ಪೊಲೀಸರ ದಂಡದ ಎಡವಟ್ಟಿನ ರಶೀದಿ ಎಲ್ಲೆಡೆ ವೈರಲ್ ಆಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...