alex Certify ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ಆಗಸ್ಟ್ ನಿಂದ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ: ಡಿಎಲ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ಆಗಸ್ಟ್ ನಿಂದ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ: ಡಿಎಲ್ ವಶಕ್ಕೆ

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾ‌ರ್ ಸೂಚನೆ ನೀಡಿದ್ದಾರೆ.

ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ.

ಈ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ.

ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ(Wrong side driving), ಪುಟ್ ಪಾತ್ ಮೇಲೆ ವಾಹನ ಚಾಲನೆ(Driving on Foot path) ಬಗ್ಗೆ ವಿಶೇಷ ಕಾರ್ಯಾಚರಣೆ ಮಾಡುವುದು, ಇದರ ಜೊತೆಗೆ Defective Number Plate ವಿರುದ್ಧವೂ ಆಗಸ್ಟ್ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ(National Highway) ಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನ ಮಾಡುವುದು ಜೀವನಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ(Wrong side driving) ವಾಹನ ಚಾಲನೆ ಮಾಡುವವರ ಮೇಲೆ ಬಿಎನ್‌ಎಸ್ 281 ಅಡಿಯಲ್ಲಿ ಮತ್ತು 184 IMV ಕಾಯ್ದೆಯಡಿ ಹಾಗೂ FIR ದಾಖಲು ಮಾಡಲು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್‌ಗಾಗಿ ಎಫ್‌ಐಆರ್ ದಾಖಲಿಸಬೇಕು ಮತ್ತು ಡಿಎಲ್ ವಶಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಪುಟ್ ಪಾತ್ ಮೇಲೆ ಮೋಟಾರು ಸೈಕಲ್‌ಗಳ ಚಾಲನೆ ಮಾಡುವುದು ಬಹಳ ಸಾಮಾನ್ಯವಾಗಿರುತ್ತದೆ. ಅದಕ್ಕಾಗಿ ಈ ಕುರಿತು ವಿಶೇಷ ಕಾರ್ಯಾಚರಣೆ ಮಾಡುವುದು. ಇದರ ಬಗ್ಗೆ ಮುಂಚಿತವಾಗಿ ಸಾಮಾಜಿಕ ಜಾಲತಾಣ, ಕರಪತ್ರ ಹಾಗೂ ದ್ವನಿ ವರ್ದಕ ಉಪಕರಣಗಳ ಮೂಲಕ ತಿಳಿವಳಿಕೆ ನೀಡುವ ಬಗ್ಗೆ ಕ್ರಮ ವಹಿಸಬೇಕು. ಕ್ರಮ ಕೈಗೊಂಡು ಆ. 31 ರೊಳಗಾಗಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...