![](https://kannadadunia.com/wp-content/uploads/2022/12/honda-activa-traffic-fine-india-new-rules-police-1200x675-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಬೈಕ್ ಸವಾರಿನಿಗೆ ಸಂಚಾರಿ ಪೊಲೀಸರು ಭಾರೀ ದಂಡ ವಿಧಿಸಿರುವ ಘಟನೆ ನಡೆದಿದೆ.
ಬರೊಬ್ಬರಿ 240 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ ಸೇರಿದಂತೆ ಒಟ್ಟು 240 ಬಾರಿ ನಿಯಮಗಳ ಉಲ್ಲಂಘನೆ ಆಗಿದೆ. ಈ ಬೈಕ್ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 1.25 ಲಕ್ಷ ರೂ ದಂಡ ವಿಧಿಸಿದ್ದಾರೆ.
ಮಂಜುನಾಥ್ ಎಂಬುವರಿಗೆ ಸೇರಿದ ಬೈಕ್ ಇದಾಗಿದೆ. ಈ ಬೈಕ್ ಮೂಲಕ ಬರೋಬ್ಬರಿ 240 ಬಾರಿ ಸಂಚಾರ ನಿಯಮಗಳ ಉಲ್ಲಂಘಿಸಲಾಗಿದೆ. ಟ್ರಾಫಿಕ್ ನಿಯಮ ಪಾಲಿಸದ ಸ್ಕೂಟಿ ಮೇಲೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸದ್ಯ ಬೈಕ್ ಸವಾರನಿಗೆ 1.25 ಲಕ್ಷ ರೂ ದಂಡ ವಿಧಿಸಲಾಗಿದೆ.