ರಾಮನಗರ : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ರಾಮನಗರ ಪೊಲೀಸರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಒಂದೇ ವಾರದಲ್ಲಿ 1,360 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, 11 ಲಕ್ಷ ರೂ.ಕ್ಕಿಂತ ಹೆಚ್ಚು ದಂಡ ಸಂಗ್ರಹಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ನಿಯಂತ್ರಣ ಹಾಗೂ ಸಂಚಾರ ನಿಯಮ ಪಾಲನೆಗೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡ ಹಾಕುತ್ತಿದ್ದಾರೆ.ಒಂದೇ ವಾರದಲ್ಲಿ ಬರೋಬ್ಬರಿ 1,360 ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು 11 ಲಕ್ಷ ರೂ.ಗಿಂತ ಹೆಚ್ಚು ದಂಡ ವಸೂಲಿ ಮಾಡಿದ್ದಾರೆ.
ಬೆಂ-ಮೈ ಎಕ್ಸ್ ಪ್ರೆಸ್ ವೇ ನಲ್ಲಿ ಅತಿವೇಗವಾಗಿ ವಾಹನ ಚಲಾಯಿಸಿದ್ದಕ್ಕಾಗಿ 694 ಪ್ರಕರಣ, ಲೇನ್ ಡಿಸಿಪ್ಲಿನ್ ಉಲ್ಲಂಘನೆಗೆ ಸಂಬಂಧಿಸಿದಂತೆ 260 ಪ್ರಕರಣ, ಸೀಟ್ ಬೆಲ್ಟ್ ಹಾಕದಿದ್ದಕ್ಕೆ 205 ಪ್ರಕರಣ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡಿದಕ್ಕೆ 110 ಪ್ರಕರಣ ಸೇರಿದಂತೆ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ 93 ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು 11 ಲಕ್ಷಕ್ಕೂ ಹೆಚ್ಚು ಹಣ ದಂಡದ ಮೂಲಕ ಸಂಗ್ರಹಿಸಿದ್ದಾರೆ.