ತುಮಕೂರು : ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿಯಲ್ಲಿ ನಡೆದಿದೆ.
ಜಿ.ಹೊಸಹಳ್ಳಿ ಗ್ರಾಮದ ಅಂಗಡಿ ಮಂಜಣ್ಣ ಎಂಬುವವರ ಮಗು ಕುಶಾಲ್ (3) ಸಾವನ್ನಪ್ಪಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದನ್ನು ಪೋಷಕರು ಗಮನಿಸಿದ ಹಿನ್ನೆಲೆ ಮಗು ಮೃತಪಟ್ಟಿದೆ.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು,ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಮಗು ಸಾವಿನ ಹಿನ್ನೆಲೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.