![](https://kannadadunia.com/wp-content/uploads/2023/06/noida-400x236.png)
ಲಕ್ನೋ : ಫ್ಯಾಶನ್ ಶೋ ನಡೆಯುತ್ತಿದ್ದಾಗ ಕಬ್ಬಿಣದ ಕಂಬ ಬಿದ್ದು 24 ವರ್ಷದ ರೂಪದರ್ಶಿ ಸ್ಥಳದಲ್ಲೇ ಮೃತಪಟ್ಟು, ಯುವಕನೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ನೋಯ್ಡಾದ ಫಿಲ್ಮ್ ಸಿಟಿ ಪ್ರದೇಶದಲ್ಲಿರುವ ಸ್ಟುಡಿಯೋದಲ್ಲಿ ನಡೆದಿದೆ.
ಮೃತರನ್ನು ವಂಶಿಕಾ ಚೋಪ್ರಾ ಮತ್ತು ಗಾಯಗೊಂಡ ವ್ಯಕ್ತಿಯನ್ನು ಬಾಬಿ ರಾಜ್ ಎಂದು ಗುರುತಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೋಯ್ಡಾ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ಶಕ್ತಿ ಅವಸ್ಥಿ ಮಾತನಾಡಿ, “ಫಿಲ್ಮ್ ಸಿಟಿಯ ಸ್ಟುಡಿಯೋದಲ್ಲಿ ನಡೆದ ಫ್ಯಾಷನ್ ಶೋ ಸಮಯದಲ್ಲಿ ವಂಶಿಕಾ ಚೋಪ್ರಾ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.