alex Certify ಭೀಕರ ಅಪಘಾತ: ಜಾನುವಾರುಗಳಿಗೆ ಡಿಕ್ಕಿ ಹೊಡೆದು ನಾಲೆಗೆ ಬಿದ್ದ ಕಾರ್: 7 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ಜಾನುವಾರುಗಳಿಗೆ ಡಿಕ್ಕಿ ಹೊಡೆದು ನಾಲೆಗೆ ಬಿದ್ದ ಕಾರ್: 7 ಜನ ಸಾವು

ನವದೆಹಲಿ: ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಾನುವಾರುಗಳಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರ್ ನಾಲೆಗೆ ಬಿದ್ದು 7 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಘಟನೆಯ ಮಾಹಿತಿ ಪಡೆದ ಐಕೌನಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ನಾಲೆಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಶ್ರಾವಸ್ತಿಯ ಇಕೌನಾ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾದ್ವಾರದ ಬಳಿ ಈ ಅಪಘಾತ ಸಂಭವಿಸಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಇದ್ದಕ್ಕಿದ್ದಂತೆ ದನವೊಂದು ಕಾರಿನ ಮುಂದೆ ಬಂದಿದ್ದು, ಅದನ್ನು ಉಳಿಸಲು ಪ್ರಯತ್ನಿಸುವಾಗ ಕಾರ್ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ ಎಂದು ಚಾಲಕ ಹೇಳಿದರು. ಈ ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾನೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಉಳಿದವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದವರೆಲ್ಲರೂ ನೇಪಾಲಗಂಜ್ ನಿವಾಸಿಗಳಾಗಿದ್ದು, ಯಾವುದೋ ಕೆಲಸದ ನಿಮಿತ್ತ ಇಲ್ಲಿಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...