ಶಿವಮೊಗ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿದೆ.
ಪ್ರಕರಣ 1
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ನಡೆದಿದೆ.ಪರಶುರಾಮ್ (17) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯ ಹಿಂಭಾಗ ಈತ ಆತ್ಮಹತ್ಯೆ ಮಾಡಿಕೊಂಡಿದ್ದು, ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಪ್ರಕರಣ 2
ಶಿವಮೊಗ್ಗ: ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲವಿಠಲಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.
ಪರೀಕ್ಷೆಗೆ ಹಾಜರಾಗಲು ಗ್ರಾಮದಿಂದ ಶಿವಮೊಗ್ಗಕ್ಕೆ ತೆರಳಲು ಅವರು ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಚನ್ನಗಿರಿ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಇನೋವಾ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.