ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೇಬಿ ಬೆಟ್ಟ, ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕ್ರಿಯೆಗೆ ಸಿದ್ಧತೆ ನಡೆಸಲಾಗಿದ್ದು, ಸರ್ಕಾರದ ಕ್ರಮಕ್ಕೆ ರೈತರು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಆರ್.ಎಸ್ ನ 20 ಕಿ.ಮೀ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯಲಿದ್ದು, ರೈತರಲ್ಲಿ ಅತಂಕ ಮೂಡಿದೆ. ಈಗಾಗಲೇ ಜಾರ್ಖಂಡ್ ಮೂಲದ ಭೂ ವಿಜ್ಞಾನ ಅಧಿಕಾರಿಗಳ ತಂಡ ಬೇಬಿ ಬೆಟ್ಟ ಹಾಗೂ ಕೆ ಆರ್ ಎಸ್ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಗೆ ಜಾಗ ಪರಿಶೀಲನೆ ನಡೆಸಿದ್ದು, ಪ್ರತಿಭಟನಾ ನಿರತ ರೈತರು ಗೋ ಬ್ಯಾಕ್ ಚಳುವಳಿ ಆರಂಭಿಸಿದ್ದಾರೆ.
ರೈತರ ಪ್ರತಿಭಟನೆಗೆ ಬೇಬಿ ಬೆಟ್ಟದ ಸ್ಥಳೀಯರು ಸಾಥ್ ನೀಡಿದ್ದು, ಸರ್ಕಾರ ಹಾಗೂ ಆಧಿಕಾರಿಗಳ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲಿಸರು ಹರಸಾಹಸ ಪಡುತ್ತಿದ್ದಾರೆ.