
ಅಪಘಾತದ ತೀವ್ರತೆಗೆ Mysuru-Darbhanga Express ರೈಲಿನ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಅಪಘಾತದ ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ.
ಈ ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರು ಚಿತ್ರ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ರಕ್ಷಣಾ ತಂಡಗಳ ಸಹಾಯ ಯಾಚಿಸಿದ್ದಾರೆ.