ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ ಶನಿವಾರ 100 ದಿನ ಪೂರೈಸಿದೆ.
ಇದೇ ವೇಳೆ ರೈತರು ದೇಶಾದ್ಯಂತ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಮಾರ್ಚ್ 13 ರಂದು ದೇಶಾದ್ಯಂತ ರೈಲು ತಡೆ ಚಳವಳಿ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ರೈತ ನಾಯಕ ದರ್ಶನ್ ಪಾಲ್ ಅವರು, ಮಾರ್ಚ್ 13 ರಂದು ದೇಶಾದ್ಯಂತ ರೈಲು ತಡೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳಿಂದ ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ರದ್ದಾಗಲಿದೆ. ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗಲಿದೆ ಎಂದು ಕಿಡಿಕಾರಿದ್ದಾರೆ.