ಆಂಧ್ರಪ್ರದೇಶದಲ್ಲಿ ರೈಲು ದುರಂತ ( Train Accident) ನಡೆದ ಹಿನ್ನೆಲೆ ಪರಿಣಾಮ 12 ರೈಲುಗಳ ಸಂಚಾರ ರದ್ದಾಗಿದೆ.
ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ .
ಭಾನುವಾರ ಆಂಧ್ರ ಪ್ರದೇಶದ ವಿಜಯನಗರದಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದ ನಂತರ 12 ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ 15 ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.
ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ.