alex Certify ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೊರೋನಾ ಹಿನ್ನೆಲೆಯಲ್ಲಿ ನಿಂತಿದ್ದ ವಿಶೇಷ ರೈಲು ಸಂಚಾರ ಪುನರಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೊರೋನಾ ಹಿನ್ನೆಲೆಯಲ್ಲಿ ನಿಂತಿದ್ದ ವಿಶೇಷ ರೈಲು ಸಂಚಾರ ಪುನರಾರಂಭ

ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಲುಗಡೆಯಾಗಿದ್ದ ವಿಶೇಷ ರೈಲು ಸೇವೆ ಪುನರಾರಂಭ ಮಾಡಲಾಗಿದೆ.

2019-20 ರಲ್ಲಿ ಪ್ರಾರಂಭಗೊಂಡಿದ್ದ ಶಿವಮೊಗ್ಗ-ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವಾರಕ್ಕೆ ಎರಡು ಬಾರಿ ಸಂಚರಿಸುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ದೇಶಾದ್ಯಂತ ರೈಲು ಸೇವೆಗಳನ್ನು ನಿಲುಗಡೆ ಮಾಡಿದ ಸಂದರ್ಭದಲ್ಲಿ ಈ ಎರಡು ರೈಲು ಸೇವೆಗಳನ್ನು ಸಹ ರೈಲ್ವೆ ಇಲಾಖೆಯಿಂದ ಹಿಂಪಡೆಯಲಾಗಿತ್ತು. ಈಗ ವಿಶೇಷ ರೈಲ್ವೆ ಸೇವೆಯನ್ನು ಮತ್ತೆ ಮುಂದುವರೆಸಲಾಗಿದೆ.

06223 ಶಿವಮೊಗ್ಗ-ಚೆನ್ನೈ ರೈಲು ಪ್ರತಿ ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ಸಂಜೆ 07:00 ಕ್ಕೆ ಹಾಗೂ 06224 ಚೆನ್ನೈ-ಶಿವಮೊಗ್ಗ ರೈಲು ಪ್ರತಿ ಸೋಮವಾರ ಮತ್ತು ಬುಧವಾರ ಚೆನ್ನೈನಿಂದ ಮಧ್ಯಾಹ್ನ 03:30 ಕ್ಕೆ ಪ್ರಯಾಣಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...