
ಬೆಂಗಳೂರು: ಮಹಿಳೆಯೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ 1ರ ಬಳಿ ಕಾಂಪೌಂಡ್ ಪಕ್ಕದಲ್ಲಿ ಸುಮಾರು 35 ವರ್ಷದ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ದುರುಳರು ಮಹಿಳೆಯ ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಹತ್ಯೆಗೈದು ಬಳಿಕ ಬೆಂಕಿ ಹಚ್ಚಿದ್ದಾರೆ. ಶವವನ್ನು ಕಂಡ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.