ಚಲಿಸುತ್ತಿದ್ದ ರೈಲಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಉತ್ತರ ಪ್ರದೇಶದ ಆಮ್ರೋಹದಲ್ಲಿ ನಡೆದಿದೆ.
16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು. ಮೃತ ವಿದ್ಯಾರ್ಥಿನಿ ಗಜರೌಲಾ ಪಟ್ಟಣದ ಆವಂತಿಕಾ ನಗರದವಳು. ಬಾನ್ಪುರ ಬಳಿ ಚಲಿಸುತ್ತಿದ್ದ ರೈಲಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.