ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಗೆ ರೈಲ್ವೆ ಸಿಬ್ಬಂದಿಯೇ ಕಿರುಕುಳ ನೀಡಿರುವ ಘಟನೆ ಗೊಂಡಿಯಾ-ಬರೌನಿ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.
ರೈಲು ಬೋಗಿ ಪರಿಚಾರಕ ಮಹಿಳೆಗೆ ಕಿರುಕುಳ ನೀಡಿದ್ದಾನೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅ.22ರಂದು ಬಲ್ಲಿಯಾ ನಿಲ್ದಾಣದಿಂದ ರೈಲು ಹೊರಟ ಬಳಿಕ ಈ ಘಟನೆ ನಡೆದಿದೆ.
ಬಿಹಾರದ ಮೋತಿಹಾರಿ ಜಿಲ್ಲೆಯ ಮಹಿಳೆ ತನ್ನ ಸೀಟ್ ನಲ್ಲಿ ಮಲಗಿದ್ದರು. ಈ ವೇಳೆ ಬೋಗಿ ಪರಿಚಾರಕ ರಾಕೇಶ್ ಕುಮಾರ್ ಶ್ರೀವಾಸ್ತವ ಎಂಬಾತ ಕಿರುಕುಳ ನೀಡಿದ್ದಾನೆ. ತಕ್ಷಣ ಸಂತ್ರಸ್ತೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಛಾಪ್ರಾ ಜಿಆರ್ ಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ರೈಲ್ವೆ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದೆ.