alex Certify 10 ನೇ ತರಗತಿಯಿಂದ ಪದವಿ ಹೊಂದಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿಯಿಂದ ಪದವಿ ಹೊಂದಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೋಲಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2021-22ನೇ ಸಾಲಿನಲ್ಲಿ ಕೋಲಾರ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್,ಬೌದ್ದ ಮತ್ತು ಪಾರ್ಸಿ) ಕೌಶಲ್ಯ ಅಭಿವೃದ್ದಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ನೀಡಲಾಗುವುದು.

Animator,  Software Developer,  Lot hardware solution Designer, Al Machine learning Engineer Level-4 ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ತರಬೇತಿಗೆ ವಿದ್ಯಾರ್ಹತೆ ಕನಿಷ್ಠ 10ನೇ ತರಗತಿಯಿಂದ ಪದವಿ ಹೊಂದಿರುವ ಅಭ್ಯರ್ಥಿಗಳು, 18-35 ರ ವಯೋಮಿತಿಯೊಳಗೆ ಇರುವ ಹಾಗೂ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರದ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜುಲೈ 09 ಕೊನೆಯ ದಿನಾಂಕವಾಗಿರುತ್ತದೆ. Website: http://dom.karanataka.gov.in. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನೆಲ ಮಹಡಿ, ಮೌಲಾನಾ ಆಜಾದ್ ಭವನ, ದೇವರಾಜ್ ಅರಸು ಬಡಾವಣೆ, 2ನೇ ಬ್ಲಾಕ್, ಟಮಕ ವಾರ್ಡ್ ನಂ.1, ಕೋಲಾರ ದೂರವಾಣಿ ಸಂಖ್ಯೆ: 08152-295257 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...