alex Certify ಶಿಕ್ಷಕರ ದಿನಾಚರಣೆ ಹೊತ್ತಲ್ಲೇ ಶಿಕ್ಷಕರಿಗೆ ಬಂಪರ್ ಸುದ್ದಿ, ಬಯಸಿದ ಜಿಲ್ಲೆಗೆ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ದಿನಾಚರಣೆ ಹೊತ್ತಲ್ಲೇ ಶಿಕ್ಷಕರಿಗೆ ಬಂಪರ್ ಸುದ್ದಿ, ಬಯಸಿದ ಜಿಲ್ಲೆಗೆ ವರ್ಗಾವಣೆ

ಬೆಂಗಳೂರು: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿಯೇ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೂರದ ಜಿಲ್ಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಒಂದು ಸಲ ಅವರು ಇಷ್ಟಪಡುವ ಜಿಲ್ಲೆಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮಾಡಿದ ಮನವಿ ಅನ್ವಯ, ದೂರದ ಜಿಲ್ಲೆಯಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಒಮ್ಮೆ ತವರು ಜಿಲ್ಲೆಗೆ, ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಕೊಡಲಾಗುತ್ತದೆ. ತವರು ಜಿಲ್ಲೆಗೆ ವರ್ಗಾವಣೆ ಬಯಸುವವರಿಗೆ ಪರಸ್ಪರ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಶಿಕ್ಷಕರು ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ. ಪತಿ-ಪತ್ನಿ ಪ್ರಕರಣ ಸೇರಿದಂತೆ ಶಿಕ್ಷಕರಿಗೆ ವರ್ಗಾವಣೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...