ಬೆಂಗಳೂರು: ವರ್ಗಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಬಜೆಟ್ ಅಧಿವೇಶನ ಹಾಗೂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಪ್ರಸ್ತಾವನೆ ಸಲ್ಲಿಸದಂತೆ ವಿವಿಧ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.
ವರ್ಗಾವಣೆ ಅವಧಿ ಮುಕ್ತಾಯಗೊಂಡಿದ್ದು, ಬಜೆಟ್ ಅಧಿವೇಶನ, ಚುನಾವಣೆ ಸಮೀಪಿಸುತ್ತಿರುವುದರಿಂದ ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ವರ್ಗಾವಣೆ ಸ್ಥಳೀಯ ಯೋಜನೆಗೆ ಪ್ರಸ್ತಾವನೆ ಸಲ್ಲಿಸಬಾರದು. ಸಚಿವರ ಹಂತದಲ್ಲಿ ಖಾಲಿ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಪ್ರಸ್ತಾವನೆ ಕೈಗೊಳ್ಳಲು ಸಿಎಂ ವಿವಿಧ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.