ಬೆಂಗಳೂರು: ಕೆಲವು ಪ್ರಮುಖ ಇಲಾಖೆಗಳ ವರ್ಗಾವಣೆಗೆ ಮುಖ್ಯಮಂತ್ರಿಗಳು ಬ್ರೇಕ್ ಹಾಕಿದ್ದಾರೆ. ಸಾಮಾನ್ಯ ವರ್ಗಾವಣೆ ಅವಧಿ ಈಗಾಗಲೇ ಮುಕ್ತಾಯವಾಗಿದ್ದರೂ, ಪ್ರಮುಖ ಇಲಾಖೆಗಳಿಂದ ವರ್ಗಾವಣೆ ಪ್ರಸ್ತಾವನೆ ಸಲ್ಲಿಕೆಯಾಗುತ್ತಿವೆ. ಹೀಗೆ ವರ್ಗಾವಣೆ ಕೋರಿ ಪ್ರಸ್ತಾವನೆಗಳು ಹೆಚ್ಚಳವಾಗುತ್ತಿರುವದನ್ನು ಗಮನಿಸಿದ ಮುಖ್ಯಮಂತ್ರಿಗಳು ವರ್ಗಾವಣೆ ಪ್ರಸ್ತಾವನೆ ತರಬೇಡಿ ಎಂದು ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮುಂದಿನ ಆದೇಶದವರೆಗೆ ವರ್ಗಾವಣೆ ಸಂಬಂಧಿತ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆಯಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಚುನಾವಣೆ ಸಮಯದಲ್ಲಿ ಹೆಚ್ಚು ವರ್ಗಾವಣೆ ಸರಿಯಲ್ಲ, ಎಲ್ಲಾ ವರ್ಗಾವಣೆಗೆ ಒಪ್ಪಿಗೆ ನೀಡಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.