ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಆಯುಕ್ತರಿಗೆ ಸೂಚಿಸಿದ್ದಾರೆ.
5 ವರ್ಷಕ್ಕಿಂತ ಹೆಚ್ಚಿನ ಅವಧಿಯಿಂದ ಒಒಡಿ ಮೇಲೆ ಕಾರ್ಯನಿರ್ವಹಿಸುತ್ತಿರುವವರನ್ನು ಕೂಡಲೇ ಬಿಡುಗಡೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ದೇಶನ ನೀಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕೆಲವರು ವಿಶೇಷ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂ1.50 ಲಕ್ಷದಿಂದ 3 ಲಕ್ಷ ರೂ. ವರೆಗೆ ವೇತನ ಪಡೆದು ಪಾಠ ಮಾಡದೆ ವಿಶೇಷ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವೇತನ ನೀಡಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತಾಗಿದೆ. ಕೆಲವು ವಿಶೇಷ ಅಧಿಕಾರಿಗಳ ವಿರುದ್ಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪಿಯುಸಿ ಸೀಟು ಕೊಡಿಸುವ ಲಾಬಿ, ಅನುದಾನಿತ ಕಾಲೇಜುಗಳಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ, ನ್ಯಾಕ್ ಗ್ರೇಡ್ ಕೊಡಿಸಲು ಹಣಕ್ಕೆ ಬೇಡಿಕೆ ಇಡುವುದು ಮೊದಲಾದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.