alex Certify ಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೊಲೀಸ್ ದಂಪತಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಕೆಲವು ನಿಯಮಗಳ ಸಡಿಲಿಕೆಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಿರುವ ನಿಯಮಗಳು ಕಠಿಣವಾಗಿವೆ. ಅವುಗಳನ್ನು ಸಡಿಲಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಪೊಲೀಸ್ ದಂಪತಿ ಅಂತರ ಜಿಲ್ಲಾ ವರ್ಗಾವಣೆಯ ಕೆಲ ನಿಯಮ ಸಡಿಲಿಕೆ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದವರು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಸ್ವಾಭಾವಿಕವಾಗಿ ಅವರಿಗೆ ತಮ್ಮ ಊರುಗಳ ಕಡೆ ಕೆಲಸ ಮಾಡಬೇಕೆಂಬ ಆಸೆ ಇರುತ್ತದೆ. ಅವರಿಗೆ ಹೇಗೆ ಅವಕಾಶ ಕಲ್ಪಿಸಬೇಕೆಂಬುದರ ಬಗ್ಗೆ ಚಿಂತನೆ ನಡೆದಿದೆ. ವರ್ಗಾವಣೆ ನಿಯಮಗಳನ್ನು ಸಡಿಲಿಕೆ ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...