ಬೆಂಗಳೂರು: ರಾಜ್ಯ ಸರ್ಕಾರ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಶರ್ಮಾ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕಿಯಾಗಿ, ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್. ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹಾಗೂ ಬಿಬಿಎಂಪಿ ವಿಶೇಷ ಭೂಸ್ವಾಧೀನ ಅಧಿಕಾರಿ ಪ್ರತೀಕ್ ಬಯಾಲ್ ಅವರನ್ನು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ತುಮಕೂರು ಜಿಲ್ಲೆಯ ಮಧುಗಿರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ರಿಶಿ ಆನಂದ್ ಅವರನ್ನು ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.