ಬೆಂಗಳೂರು : 5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಜುಲೈ 1 ರಿಂದಲೇ ಪಡಿತರ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೂ ಹಣ ನೀಡುತ್ತೇವೆ. ಮನೆಯಲ್ಲಿ ಎಷ್ಟು ಜನ ಇರುತ್ತಾರೋ ಅಷ್ಟು ಜನರಿಗೆ ತಲಾ ತಿಂಗಳಿಗೆ 170 ರೂ ನೀಡುತ್ತೇವೆ ಎಂದರು. 5 ಕೆಜಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಜನರಿಗೆ ನೀಡಲು ನಿರ್ಧಾರ ಮಾಡಲಾಗಿದೆ. BPL ಕಾರ್ಡ್ನಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ಮಾಸಿಕ 170 ರೂ. ನೀಡಲಾಗುತ್ತೆ. ಅಕ್ಕಿ ಸಿಗುವವರೆಗೆ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ನೀಡುತ್ತೇವೆ ಎಂದು ಹೇಳಿದರು.
ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ‘ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ ಎಂದರು. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು. ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂ ನೀಡುತ್ತೇವೆ , ಅಕ್ಕಿ ಸಂಗ್ರಹ ಆಗುವವರೆಗೆ ಹಣ ನೀಡಲು ನಿರ್ಧರಿಸಲಾಗಿದೆ ಎಂದರು.