
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕೋಲಾರ, ಉತ್ತರಕನ್ನಡ, ಚಾಮರಾಜನಗರ, ತುಮಕೂರು, ರಾಯಚೂರು, ಚಿಕ್ಕಮಗಳೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.