
ಬೆಂಗಳೂರು: ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ(ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ. ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಸೂಚನೆ ನೀಡಿದೆ.
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು 2024-25ನೇ ಸಾಲಿನಿಂದ ಕೌನ್ಸಿಲಿಂಗ್ ಮೂಲಕ ಮಾಡಲು ಸರ್ಕಾರವು ಆದೇಶಿಸಿದೆ.
