ಹುಬ್ಬಳ್ಳಿ: ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿಯ ಬಗ್ಗೆ ಚರ್ಚಿಸಲು ಜನವರಿ 20ರಂದು ಬೆಂಗಳೂರಿನಲ್ಲಿ ಕಾರ್ಯದರ್ಶಿಗಳು, ಅಧಿಕಾರಿಗಳ ಸಭೆ ಕರೆದಿದ್ದು, ಅದನ್ನು ಹಿಂಪಡೆಯಲು ಸೂಚಿಸುವುದಾಗಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. 250 ಕ್ಕಿಂತ ಕಡಿಮೆ ಸಂಖ್ಯೆಯ ಮಕ್ಕಳಿರುವ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡಲು ಮುಂದಾಗಿದ್ದು, ಇಂತಹ ಅವಜ್ಞಾನಿಕ ಕ್ರಮ ಕೈಗೊಂಡ ಸಂದರ್ಭದಲ್ಲಿ ಸರ್ಕಾರ ಕಣ್ಣು ಮುಚ್ಚಿ ಕುಳಿತುಕೊಳ್ಳಬಾರದು ಎಂದು ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶಿಕ್ಷಣ ನೀತಿ ಹಿಂಪಡೆಯಲು ಹೇಳುತ್ತೇನೆ. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಇಂತಹ ನೀತಿಗಳಿಂದ ಕನ್ನಡ ಶಾಲೆಗಳಿಗೆ ಮಾರಕವಾಗುತ್ತದೆ. ಇಂತಹ ಅಧಿಕಾರಿಗಳಿಂದಲೇ ಕನ್ನಡ ಶಾಲೆ ಮುಚ್ಚುತ್ತಿವೆ ಎಂದು ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.