ಬೆಂಗಳೂರು : ಯಾವುದೇ ಇಲಾಖೆ ಆಗಲಿ ‘ವರ್ಗಾವಣೆ’ ನಿಯಮಗಳಂತೆ ಮಾಡಬೇಕು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವರ್ಗಾವಣೆ ದಂಧೆ ಕುರಿತು ವಿಪಕ್ಷಗಳು ಆರೋಪ ಮಾಡುತ್ತಿದ್ದು, ಈ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಯಾವುದೇ ಇಲಾಖೆ ಆಗಲಿ ವರ್ಗಾವಣೆ ನಿಯಮಗಳಂತೆ ಮಾಡಬೇಕು. ಎಲ್ಲವೂ ಪಾರದರ್ಶಕವಾಗಿ ನಡೆಯಬೇಕು. ಅವಧಿ ಪೂರ್ವ ವರ್ಗಾವಣೆ ಇದ್ದರೆ ಅದು ಸಿಎಂ ವಿವೇಚನೆಗೆ ಬಿಟ್ಟಿದ್ದು. ಎಲ್ಲರನ್ನು ನಾವು ಸಮಾಧಾನ ಪಡಿಸಲು ಆಗಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಯಾವುದೇ ಇಲಾಖೆ ಆಗಲಿ ‘ವರ್ಗಾವಣೆ’ ನಿಯಮಗಳಂತೆ ಮಾಡಬೇಕು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಆಡಳಿತ ಪಕ್ಷದ ವಿರುದ್ಧ ಬಿಜೆಪಿಗೆ ಸಿಕ್ಕಿರುವ ಮತ್ತೊಂದು ಅಸ್ತ್ರ ವರ್ಗಾವಣೆ ದಂಧೆ. ಈ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸುತ್ತಿದೆ. ಇನ್ನೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದರು.