alex Certify ಟ್ರಾನ್ಸ್ ಫಾರ್ಮರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾನ್ಸ್ ಫಾರ್ಮರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗಳು ಸಾವು

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು, ತಂದೆ ಶಿವರಾಜ್(55) ರಾತ್ರಿ ಸಾವನ್ನಪ್ಪಿದ್ದರು. ಇಂದು ಬೆಳಗಿನ ಜಾವ ಅವರ ಪುತ್ರಿ ಚೈತನ್ಯಾ(19) ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಂದೆ, ಮಗಳು ನಿನ್ನೆ ಮಧ್ಯಾಹ್ನ ಮಂಗನಹಳ್ಳಿ ಸೇತುವೆ ಮಾರ್ಗವಾಗಿ ತೆರಳುತ್ತಿದ್ದಾಗ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಆಯಿಲ್ ಸಿಡಿದು ಬೆಂಕಿ ಹೊತ್ತುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಕ್ಷನ್ 304a ಅಡಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...