alex Certify ಮಂಗಳಮುಖಿ ಆರ್.ಜೆ. ಅನನ್ಯಕುಮಾರಿ ಅನುಮಾನಾಸ್ಪದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳಮುಖಿ ಆರ್.ಜೆ. ಅನನ್ಯಕುಮಾರಿ ಅನುಮಾನಾಸ್ಪದ ಸಾವು

ಕೊಚ್ಚಿ: ಕೇರಳದ ಮೊದಲ ಮಂಗಳಮುಖಿ ಆರ್.ಜೆ. ಅನನ್ಯಕುಮಾರಿ ಅಲೆಕ್ಸ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಲಪ್ಪುರಂ ಜಿಲ್ಲೆಯ ವೆಂಗಾರಾ ವಿಧಾನಸಭೆ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದರು. ನಿರಂತರ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು.

ಕೊಲ್ಲಂ ಪೆರುಮಾನ್ ನಿವಾಸಿಯಾಗಿರುವ ಅನನ್ಯ ಕುಮಾರಿ ಕೇರಳದ ಮೊದಲ ಮಂಗಳಮುಖಿ ರೇಡಿಯೋ ಜಾಕಿಯಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ಮಂಗಳಮುಖಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಕೊಚ್ಚಿಯ ಎಡಪ್ಪಳ್ಳಿಯಲ್ಲಿರುವ ಫ್ಲ್ಯಾಟ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...