ಹೊಸಪೇಟೆ(ವಿಜಯನಗರ): ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿರುವ ಮೈತ್ರಿ ಯೋಜನೆಯಡಿ ಸರ್ಕಾರದ ಆದೇಶದಂತೆ ತೃತೀಯ ಲಿಂಗಿಗಳಿಗೆ(ಮಂಗಳಮುಖಿಯರು) ಮಾಸಿಕ 600 ರೂ.ಗಳ ಮಾಸಾಶನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನಾಡಕಚೇರಿ ತಂತ್ರಾಂಶದಲ್ಲಿ ಅಥವಾ ತಾಲೂಕು ಕಚೇರಿಯ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ, ಮಾಸಾಶನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಹೊಸಪೇಟೆಯ ತಹಶೀಲ್ದಾರ್ ತಿಳಿಸಿದ್ದಾರೆ.