ಬೆಂಗಳೂರು: ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ.
ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗೃಹಲಕ್ಷ್ಮಿ ಹಣಕ್ಕಾಗಿ ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆ ಮಾಡಿದ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.
ರಾಜ್ಯದಲ್ಲಿ 40,000ಕ್ಕೂ ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಜೀವನೋಪಾಯಕ್ಕೆ ಗೃಹಲಕ್ಷ್ಮೀ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ತಿಂಗಳಾಂತ್ಯದೊಳಗೆ ಅರ್ಜಿ ಸಲ್ಲಿಸಿದರೆ ಮುಂದಿನ ತಿಂಗಳಿಂದ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.