BIG NEWS: ಮಂಗಳಮುಖಿ ಈಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ: ರಾಜ್ಯದಲ್ಲಿಯೇ ಮೊದಲ ಘಟನೆಗೆ ಸಾಕ್ಷಿಯಾಯ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿವಿ

ಬಳ್ಳಾರಿ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿಯಾಗಿ ಮಂಗಳಮುಖಿಯೊಬ್ಬರು ನೇಮಕಗೊಳ್ಳುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಪ್ರಾಧ್ಯಾಪಕಿಯಾಗಿದ್ದಾರೆ. ರೇಣುಕಾ ಪೂಜಾರಿ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳಮುಖಿಯೊಬ್ಬರು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಕರ್ನಾಟಕದಲ್ಲಿಯೇ ಇದೇ ಮೊದಲು.

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೆಣುಕಾ ಪೂಜಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಮುಗಿಸಿದ್ದರು. ಬಳ್ಳಾರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ, ಕುರುಗೋಡಿನಲ್ಲಿ ಪದವಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಬಳ್ಳಾರಿಯ ವಿಜಯನಗರ ಶ್ರೀಕೃಷ್ನದೇವರಾಯ ವಿವಿಯಲ್ಲಿ ಮುಗಿಸಿದ್ದರು.

ವಿದ್ಯಾರ್ಥಿ ದಿಸೆಯಲ್ಲಿಯೇ ದೇಹದಲ್ಲಿನ ಬದಲಾವಣೆಯಿಂದಾಗಿ ಮಂಗಳಮುಖಿಯಾಗಿ ಬದಲಾಗಿದ್ದ ರೇಣುಕಾ ಪೂಜಾರಿ, ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ, ಸ್ನಾತೋಕತ್ತರ ಪದವಿಯಲ್ಲಿಯೂ ಶೇ.70ರಷ್ಟು ಅಂಕಪಡೆದಿದ್ದಾರೆ. ಸದ್ಯ ತಾನು ಸ್ನಾತಕೋತರ ಪದವಿ ಪಡೆದ ವಿಶ್ವವಿದ್ಯಾಲಯದಲ್ಲಿಯೇ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read