ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮಗಳ ಕಾರ್ಮಿಕರು ಡಿಸೆಂಬರ್ 31ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚರದಲ್ಲಿ ಭಾರಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕೆ.ಎಸ್.ಆರ್.ಟಿ.ಸಿ. ಬಿಎಂಟಿಸಿ, ಎನ್.ಡಬ್ಲ್ಯು ಕೆ. ಆರ್.ಟಿ.ಸಿ, ಕೆಕೆಆರ್ ಟಿಸಿ ಸೇರಿದಂತೆ ನಾಲ್ಕು ನಿಗಮಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಅಸ್ತವ್ಯಸ್ಥಗೊಳ್ಳಲಿದೆ.
ಸಾರಿಗೆಸಂಘಟನೆಗಳ ಮುಖಂಡರು, ನೌಕರರು ಹಾಗೂ ಪ್ರಯಾಣಿಕರಿಗೆ ಕರಪತ್ರ ಹಂಚುವ ಮೂಲಕ ಮುಷ್ಕರಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸಿವೆ.
ಜನವರಿ 1ರಿಂದ ಬಸ್ ಸಂಚಾರವಿರುವುದಿಲ್ಲ ಸಹಕರಿಸಿ ಎಂದು ಪ್ರಾಅಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಈಗಾಗ್ಲೇ ಕರಪತ್ರದ ಮೂಲಕ ಮನವಿ ಮಾಡಲಾಗುತ್ತಿದೆ. ಡಿಸೆಂಬರ್ 31ರಿಂದ ಯಾರೂ ಕರ್ತವ್ಯಕ್ಕೆ ಹಾಜರಾಗಬಾರದು ಎಂದು ಕಂಡಕ್ಟರ್, ಡ್ರೈವರ್, ಮೆಕಾನಿಕ್ ಗಳಿಗೆ ಸಾರಿಗೆ ಮುಖಂಡರು ಕರಪತ್ರ ಹಂಚುತ್ತಿದ್ದಾರೆ.
ಈ ವೇಳೆ ಮಾತನಾಡಿದ ಸಾರಿಗೆ ಮುಖಂಡರು, ಶಕ್ತಿ ಯ್ಜನೆಯ ಬಾಕಿ ಹಣ 2 ಸಾವಿರ ಕೋಟಿಯಷ್ಟಿದೆ ಅದನ್ನು ಮೊದಲು ಬಿಡುಗದೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.