ಕೊಚ್ಚಿ: ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿ ಅಧೀನದ 1240 ದೇವಾಲಯಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ತಿರುವಾಂಕೂರು ದೇವಸ್ವಂ ಬೋರ್ಡ್ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಆರ್.ಎಸ್.ಎಸ್. ಕಾರ್ಯ ಚಟುವಟಿಕೆಗಳು ಸೇರಿ ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ನಿಷೇಧ ಉಲ್ಲಂಘಿಸಿ ದೇವಾಲಯಗಳಲ್ಲಿ ಚಟುವಟಿಕೆ ನಡೆಯುತ್ತಿದ್ದರೆ ಅದನ್ನು ನಿಲ್ಲಿಸುವಂತೆ ದೇವಾಲಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ದೇವಾಲಯಗಳ ವ್ಯಾಪ್ತಿಯಲ್ಲಿ ಆರ್.ಎಸ್.ಎಸ್. ಚಟುವಟಿಕೆ ನಿಯಂತ್ರಿಸಲು ವಿಫಲವಾದಲ್ಲಿ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಎಚ್ಚರಿಕೆ ನೀಡಿದೆ.
ಕೇರಳದ ಅನೇಕ ದೇವಾಲಯಗಳಲ್ಲಿ ಆರ್.ಎಸ್.ಎಸ್. ಶಾಖೆ, ಕಾರ್ಯಕ್ರಮಗಳು ನಡೆಯುತ್ತಿವೆ. ದೇವಾಲಯಗಳ ಸಿಬ್ಬಂದಿ ಇದನ್ನು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ತಿರುವಾಂಕೂರು ದೇವಸ್ಥಾನದ ಅಧ್ಯಕ್ಷ ಎನ್. ವಾಸು ಅವರು, ರಾಜಕೀಯ ಉದ್ದೇಶಕ್ಕಾಗಿ ದೇವಾಲಯಗಳ ಆವರಣ ಬಳಕೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಕಳೆದ ವರ್ಷ ಕೈಗೊಂಡ ನಿರ್ಧಾರ ಇದರ ಇದಾಗಿದೆ ಎಂದು ಹೇಳಿದ್ದಾರೆ. ಆರ್.ಎಸ್.ಎಸ್. ಮಾತ್ರವಲ್ಲ, ಯಾವುದೇ ಸಂಘಟನೆಯ, ರಾಜಕೀಯ ಪಕ್ಷಗಳ ಚಟುವಟಿಕೆ, ಕಾರ್ಯಕ್ರಮಗಳನ್ನು ದೇವಾಲಯದಲ್ಲಿ ನಡೆಸಲು ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.