ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಕಲೀಲ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಯನಗರದ 4ನೇ ಟಿ ಬ್ಲಾಕ್ ನಲ್ಲಿ ಇಂದು ಬೆಳಿಗ್ಗೆ ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಮುರಿದು ಬಿದ್ದಿತ್ತು. ಅವಘಡದಲ್ಲಿ ಆಟೋ ಚಾಲಕ ಕಲೀಲ್ ಗಂಭೀರವಾಗಿ ಗಾಯಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕಲೀಲ್ ಮೃತಪಟ್ಟಿದ್ದಾರೆ.