ಬೆಂಗಳೂರು: ಅಪಾಯಕಾರಿಯಾಗಿದ್ದ ಮರದ ಕೊಂಬೆ ಕತ್ತರಿಸುವ ವೇಳೆ ಮರದಿಂದ ಕೆಳಗೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬೆಂಗಳೂರಿನ ವಿವಿ ಪುರದಲ್ಲಿ ನಡೆದಿದೆ.
ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮರಗಳ ವ್ಯವಸ್ಥಿತ ನಿರ್ವಹಣೆ ಕಾಮಗಾರಿಯನ್ನು ರಾಮಕೃಷ್ಣ ಎಂಬ ಗುತ್ತಿಗೆದಾರರಿಗೆ ನೀಡಲಾಗಿದೆ. ಗುತ್ತಿಗೆದಾರರ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ 45 ವರ್ಷದ ರಾಜಪ್ಪ ಮಂಗಳವಾರ ಮಧ್ಯಾಹ್ನ ವಿವಿ ಪುರದ ಮಾರ್ಕೆಟ್ ರಸ್ತೆಯ ಶಂಕರ ಹೌಸ್ ಸಮೀಪ ಮರ ಹತ್ತಿ ಕೊಂಬೆ ಕತ್ತರಿಸುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.