alex Certify ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಮರ; 8 ಜನರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಮರ; 8 ಜನರಿಗೆ ಗಂಭೀರ ಗಾಯ

ರಾಮನಗರ: ಚಲಿಸುತ್ತಿದ್ದ ವಾಹನದ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ 8 ಜನರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಯಲಾಚಿಪಾಳ್ಯ ಗ್ರಾಮದ ಬಳಿ ಟಾಟಾ ಏಸ್ ವಾಹನದ ಮೇಲೆ ಮರ ಬಿದ್ದಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಚಾಲಕ ಸೇರಿ 8 ಜನರಿಗೆ ಗಾಯಗಳಾಗಿವೆ. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂದಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚನ್ನಪಟ್ಟಣ ಗ್ರಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...