ರಾಜಸ್ಥಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ದಿಢೀರ್ ಭಾರೀ ಮಳೆ ಹಾಗೂ ಬಿರುಗಾಳಿ ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಈ ಮಧ್ಯೆ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ ಜೋಧ್‌ಪುರದಿಂದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರ ಮೇಲೆ ಮರ ಬಿದ್ದಿದೆ. ಈ ಘಟನೆಯ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ. ಮರ ದ್ವಿಚಕ್ರ ಸವಾರರ ಮೇಲೆ ಬೀಳುತ್ತಿದ್ದಂತೆ ಸ್ಥಳೀಯರು ಓಡಿಬಂದು ಅವರನ್ನು ರಕ್ಷಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಬಿಡುಗಡೆ ಮಾಡಲಾಗಿದೆ. ಮೂವರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಮಳೆಯ ನಂತರ ಜೋಧ್‌ಪುರದಲ್ಲಿ ಭಾರೀ ಟ್ರಾಫಿಕ್ ಆಗಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಬಿಡುಗಡೆ ಮಾಡಲಾಗಿದೆ. ಮೂವರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ರಾಜಸ್ಥಾನದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬಿಕಾನೆರ್‌ನಲ್ಲಿ 7 ಸೆಂ.ಮೀ ಮಳೆಯಾಗಿದ್ದರೆ, ಖೇರ್ವಾರಾ (ಉದಯಪುರ), ಪೋಕರನ್ (ಜೈಸಲ್ಮೇರ್), ಕರಣ್‌ಪುರ್ (ಗಂಗಾನಗರ), ಪಾಲಿ ಮತ್ತು ಜೋಧ್‌ಪುರದಲ್ಲಿ 5 ಸೆಂ.ಮೀ ಮಳೆಯಾಗಿದೆ.