ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್(100) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್ ಅಮೆರಿಕದ ಚಾರ್ಜಿಯಾದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
1977 ರಿಂದ 1981ರವರೆಗೆ ಅಮೆರಿಕದ 39ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಶಾಂತಿ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರಿಗೆ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.